UDAYAVANI NEWS
ಬೇತಮಂಗಲ, ನವೆಂಬರ್ 30 : ಸರ್ಕಾರಿ ಶಾಲೆ ಶಿಕ್ಷಕರಿಗೆ ಕೋಲಾರ ಜಿಲ್ಲಾ ಮಟ್ಟದ ಪ್ರೌಢಶಾಲಾ ಸಹಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸಾಮಾನ್ಯ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಎನ್ ರಾಜರೆಡ್ಡಿ ಇವರು ಮೊದಲು ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯವನ್ನು ನಿರ್ವಹಿಸುತ್ತಿದ್ದರು ನಂತರ ಸಮಾಜ ದಲ್ಲಿ ಮಕ್ಕಳಿಗೆ ತಮ್ಮಿಂದ ಆದಂತಹ ಸೇವೆಯನ್ನು ಮಾಡಬೇಕು ಎಂಬ ಹಿತ ದೃಷ್ಟಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲಾ ಮಟ್ಟದ ಸಹಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸಾಮಾನ್ಯ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಇವರಿಗೆ ಶಾಲೆಯ ಹಳೆಯ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳು ತಿಳಿಸಿದ್ದಾರೆ.
Tags
ಜಿಲ್ಲಾ ಸುದ್ದಿಗಳು