UDAYAVANI NEWS
ಬೆಂಗಳೂರು, ಡಿಸೆಂಬರ್ 18 : ನಗರದ ಜಿಯಾನ್ ಹೋಟೆಲ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಸಂಘಟನೆಯ 25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಹಾಗೂ ರಾಜ್ಯ ಮಟ್ಟದ ಮಹಿಳಾ ಘಟಕದ ಸಭೆ ನಡೆಸಲಾಯಿತು. ಇದೇ ವೇಳೆ ಸಭೆಯ ಒಮ್ಮತದಿಂದ ರಾಜ್ಯ ಮಹಿಳಾ ಉಪಾಧ್ಯಕ್ಷರನ್ನಾಗಿ ಸಂಗೀತಾ ಶೆಟ್ಟಿ ಯವರನ್ನು ಆಯ್ಕೆ ಮಾಡಲಾಯಿತು.
ಬೆಂಗಳೂರಿನ ಜಿಯಾನ್ ಹೋಟೆಲ್ ನಲ್ಲಿ ರಾಜ್ಯ ಮಟ್ಟದ ಮಹಿಳಾ ಘಟಕದ ಸಭೆ ನಡೆಸಲಾಯಿತು. ಸಭೆಯಲ್ಲಿ ಮಹಿಳಾ ಘಟಕ ಬಲಪಡಿಸುವ ಕುರಿತು ಹಾಗೂ ಕರವೇ ಸಂಘಟನೆಯ 25ನೇ ವರ್ಷದ ಬೆಳ್ಳಿ ಹಬ್ಬದಲ್ಲಿ ಮಹಿಳೆಯ ಪಾತ್ರ ಹೆಚ್ಚಿರಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು.ಸಭೆಯ ಒಮ್ಮತದಿಂದ ರಾಜ್ಯ ಮಹಿಳಾ ಉಪಾಧ್ಯಕ್ಷರನ್ನಾಗಿ ಸಂಗೀತಾ ಶೆಟ್ಟಿ ಯವರನ್ನು ಆಯ್ಕೆ ಮಾಡಿ ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ರವರನ್ನು ಸಭೆಯ ಮುಖಂಡರು ಹಾಗೂ ಎಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳ ವತಿಯಿಂದ ಸನ್ಮಾನಿಸಲಾಯಿತು.
ಈ ಸಭೆಯಲ್ಲಿ ಅಶ್ವಿನಿ ಗೌಡ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷರು,ಸಹನಾಶೇಖರ್ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ, ಶ್ವೇತಾ ಮೋಹನ್ ಗೌಡ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷರು, ಸಂಘಟನೆಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಹಾಗೂ ತಾಲೂಕಾಧ್ಯಕ್ಷರುಗಳು ಭಾಗವಹಿಸಿದ್ದರು.
Tags
ರಾಜ್ಯ ಸುದ್ದಿಗಳು