UDAYAVANI NEWS
ಮಸ್ಕಿ , ಡಿಸೆಂಬರ್ 18 : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ತಾಲ್ಲೂಕಿನ ಹುಲ್ಲೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ ವೇದಿಕೆ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ಅವಿನಾಶ ಸಂಜೀವನ್ ಶಿಂಧೆ, ಬಸನಗೌಡ ತುರುವಿಹಾಳ ಅವರು ಜ್ಯೋತಿ ಹಚ್ಚುವುದರ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಸಹಾಯಕ ಆಯುಕ್ತ ಅವಿನಾಶ ಸಂಜೀವನ್ ಶಿಂಧೆ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ತಾವೆಲ್ಲ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಹುಲ್ಲೂರು ಗ್ರಾಮದ ಜನರು ತುಂಬಾ ಉತ್ಸುಕತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲು ಸಹಕಾರ ನೀಡಿದ್ದು ಈ ಕಾರ್ಯಕ್ರಮದ ಮೂಲಕ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗುವದು ಎಂದರು.
ಶಾಸಕ ಬಸನಗೌಡ ತುರುವಿಹಾಳ ಮಾತನಾಡಿ, ಕೆಲಸಗಳಿಗಾಗಿ ಕಚೇರಿಗೆ ಪದೇ ಪದೇ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾರ್ವಜನಿಕರ ಸೌಲಭ್ಯಗಳನ್ನು ಹಾಗೂ ದಾಖಲೆಗಳನ್ನು ನಿಮ್ಮ ಗ್ರಾಮಕ್ಕೆ ಬಂದು ಸರಳವಾಗಿ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಸದುಪಯೋಗವನ್ನು ಹುಲ್ಲೂರು ಹಾಗೂ ಸುತ್ತಲಿನ ಗ್ರಾಮಗಳ ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದು ಹೇಳಿದರು. ಗ್ರಾಮದ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸಹಾಯಕ ಆಯುಕ್ತರು ಸೂಚಿಸಿದರು ಕಂದಾಯ ಇಲಾಖೆಯು ಮನಸ್ವಿನಿ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯಡಿ ಹಾಗೂ ಇಂದಿರಾಗಾಂಧಿ ವೃದ್ಧಾಪ್ಯ ವೇತನ ಯೋಜನೆ ಅಡಿಯಲ್ಲಿ 20 ಫಲಾನುಭವಿಗಳಿಗೆ ಪಿಂಚಣಿ ಆದೇಶದ ಪ್ರತಿಯನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ ಭೋಗಾವತಿ,ತಾಲೂಕು ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ, ಇಸಿಓ ಹನುಮಂತಪ್ಪ, ಪಿಎಸ್ಐ ವಿರುಪಾಕ್ಷಪ್ಪ ಹುಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಲಕ್ಷ್ಮಿ ಗಂ ಸಿದ್ದಪ್ಪ, ಶ್ರೀನಿವಾಸ ಉಪಾಧ್ಯಕ್ಷ, ವಿದ್ಯುತ್ ಸಹಾಯಕ ಅಭಿಯಂತರ ವೆಂಕಟೇಶ್, ಕಂದಾಯ ನಿರೀಕ್ಷಕ ಕರಿಬಸಪ್ಪ, ಕೃಷಿ ಅಧಿಕಾರಿ ಶಿವದತ್ತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ
ಭೂದಾಖಲೆಗಳ ಉಪನಿರ್ದಶಕ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ,ಆಹಾರ ಇಲಾಖೆ ಅಧಿಕಾರಿ, ಬಳಗಾನೂರ ಹೋಬಳಿಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಹುಲ್ಲೂರು ಗ್ರಾಮದ ಗ್ರಾಮಸ್ಥರು ಭಾಗಿಯಾಗಿದ್ದರು.
Tags
ಜಿಲ್ಲಾ ಸುದ್ದಿಗಳು