ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೂಡೋ ಕ್ರೀಡಾ ಸಾಧಕಿ ಎಂ.ರಕ್ಷಿತಾಳಿಗೆ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲ್ಲೂಕು ಆಡಳಿತದಿಂದ ಸನ್ಮಾನ



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಹರಪನಹಳ್ಳಿ, ಜನವರಿ 27 : ರಾಜ್ಯ ಮಟ್ಟದ ಜೂಡೋ ಕ್ರೀಡೆಯಲ್ಲಿ ಪ್ರಥಮ ಸ್ಥಾನಗಳಿಸಿ ಗೋಲ್ಡ್ ಮೆಡಲ್ ಪಡೆದ ಸರ್ಕಾರಿ ಪದವಿ ಪೂರ್ವದ ಕಾಲೇಜಿನ ವಿದ್ಯಾರ್ಥಿನಿ ಕ್ರೀಡಾ ಸಾಧಕಿ ರಕ್ಷಿತಾಳಿಗೆ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 
ರಾಜ್ಯ ಮಟ್ಟದ ಕ್ರೀಡಾ ಸಾಧಕಿ ಎಂ.ರಕ್ಷಿತಾ ಹರಪನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ಓದುತ್ತಿದ್ದಾಳೆ, ತಾಲ್ಲೂಕಿನ ಹುಲಿಕಟ್ಟಿ ಗ್ರಾಮದ ಶ್ರೀನಿವಾಸ ಮತ್ತು ಕೆಂಚಮ್ಮರವರ ಸುಪುತ್ರಿ. ಬಡ ಕುಟುಂಬದಲ್ಲಿ ಜನಿಸಿದ್ದರೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸುತ್ತಿದ್ದಾಳೆ. 

ಪದವಿ ಪೂರ್ವ ಇಲಾಖೆಯ ವತಿಯಿಂದ ನಡೆದ ರಾಜ್ಯ ಮಟ್ಟದ ಜೂಡೋ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ಬಂಗಾರದ ಪದಕಕ್ಕೆ ಮುತ್ತಿಕ್ಕಿದ ನಮ್ಮ ಕಾಲೇಜಿನ ಕ್ರೀಡಾ ಸಾಧಕಿ ರಕ್ಷಿತಾಳನ್ನ ತಾಲ್ಲೂಕು ಆಡಳಿತ ಗುರುತಿಸಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿರುವುದು ಸಂತಸ ತಂದಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ. ವೆಂಕಟೇಶ್ ಹಾಗೂ ಉಪನ್ಯಾಸಕ ವರ್ಗ ಹರ್ಷ ವ್ಯಕ್ತಪಡಿಸಿದರು.

Post a Comment

Previous Post Next Post