ಎಸ್ ಎಸ್ ಎಲ್ ಸಿ ಯಲ್ಲಿ ಶಾಲೆಗೆ ಪ್ರಥಮ ಸ್ಥಾನ : ಶಾಲೆಯ ಆಡಳಿತ ಮಂಡಳಿಯಿಂದ ಸನ್ಮಾನ


ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಸಿಂಧನೂರು,ಜನವರಿ 27 : ನಗರದ ಆನಂದ ಪಬ್ಲಿಕ್ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕುಮಾರಿ ಸಿಂಧು ಬಡಿಗೇರ SSLCಯಲ್ಲಿ ಶಾಲೆಗೆ ಅತಿ ಹೆಚ್ಚು ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದರಿಂದ ಶಾಲಾ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.

2022ನೇ ಸಾಲಿನ SSLCಪರೀಕ್ಷೆಯಲ್ಲಿ ಸಿಂಧನೂರಿನ ಆನಂದ ಪಬ್ಲಿಕ್ ಶಾಲೆಗೆ ಶೇ 96.33 ಅಂಕ ಪಡೆಯುವುದರ ಮೂಲಕ ಆನಂದ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸಿಂಧು ಬಡಿಗೇರ ಅಲಬನೂರು ಅವರು ಪಡೆದಿರುವುದು ಶಾಲಾ ಆಡಳಿತ ಮಂಡಳಿಗೆ ಮತ್ತು ಪಾಲಕರಿಗೆ ತುಂಬಾ ಸಂತೋಷವಾಗಿದೆ. ಶಾಲೆಯಲ್ಲೇ ಅತಿ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ ಎಂದು ಶಾಲಾ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 

ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ಹಾಗೂ ಗಣನೀಯ ಸೇವೆಗೈದ ಸಾಧಕರಿಗೆ ಸನ್ಮಾನಿಸಲಾಯಿತು.
  
ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ಗೌತಮ ಶೇಠ್, ಶಶಿದಾನಿ, 
ಮುಖ್ಯಗುರುಗಳಾದ ಈಶ್ವರ, ಅಕ್ಕನಾಗಮ್ಮ,ನಾಗವೇಣಿ,
ಅವರ ತಾಯಿ ಈರಮ್ಮ ಬಡಿಗೇರ ಇನ್ನಿತರರು ಉಪಸ್ಥಿತರಿದ್ದರು.

Post a Comment

Previous Post Next Post