UDAYAVANI NEWS
ಬೆಂಗಳೂರು, ಜನವರಿ 12 : ಕನ್ನಡದ ಹೆಸರಾಂತ ನಟ ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರನ್ನು ಭೇಟಿ ಮಾಡಿದ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ. ಹರೀಶ್, ಮನವಿ ಪತ್ರವನ್ನು ನೀಡಿದರು. ಕನ್ನಡ ಸಿನಿಮಾ ರಂಗಕ್ಕೆ ಸಾಕಷ್ಟು ಸೇವೆ ಸಲ್ಲಿಸಿರುವ ಅಂಬರೀಶ್ ಅವರಿಗೆ ರಸ್ತೆಗೆ ನಾಮಕರಣ ಮಾಡುವ ಮೂಲಕ ಗೌರವ ಸಲ್ಲಿಸುವಂತೆ ಮನವಿ ಮಾಡಿದೆ.
ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಕೊಟ್ಟಿರುವ ಮನವಿ ಪತ್ರದಲ್ಲಿ, ‘ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಸಾಧಕರಾದ ಪದ್ಮಭೂಷಣ ಡಾ.ರಾಜ್ ಕುಮಾರ್, ಶ್ರೀಮತಿ ಪಾರ್ವತಮ್ಮ ರಾಜಕುಮಾರ್, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇವರುಗಳ ಜ್ಞಾಪಕಾರ್ಥವಾಗಿ ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ರಸ್ತೆಗಳಿಗೆ ಅವರ ಹೆಸರನ್ನು ಘನ ಸರ್ಕಾರವು ಈಗಾಗಲೇ ನಾಮಕರಣ ಮಾಡಿರುವುದು ಇಡೀ, ಚಿತ್ರೋದ್ಯಮಕ್ಕೆ ಸಂದ ಗೌರವವಾಗಿದೆ. ಅದಕ್ಕಾಗಿ ಚಿತ್ರೋದ್ಯಮ ಆಭಾರಿಯಾಗಿದೆ’ ಹಾಗಾಗಿ ಕನ್ನಡದ ಹೆಸರಾಂತ ನಟ ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮನವಿ ಮಾಡಿದೆ.
Tags
ರಾಜ್ಯ ಸುದ್ದಿಗಳು