ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳಿಗೆ ಕ್ರೀಡಾಕೂಟ ಅಯೋಜನೆ


ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
ವರದಿ : ಶರಣಪ್ಪ ಹೆಳವರ,ಬಾಗಲಕೋಟೆ
ಬಾಗಲಕೋಟೆ, ಜನವರಿ 06 : ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಗೆ ಇದೇ ಜನವರಿ 7 ಮತ್ತು 8ನೇ ತಾರೀಕಿನಂದು ಕ್ರೀಡಾಕೂಟ,ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಜಿಲ್ಲಾ ಪಂಚಾಯತಿ,ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಎಲ್ಲ ವೃಂದ ಸಂಘಗಳು,ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಜರುಗಲಿವೆ. ಬಾಗಲಕೋಟೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಉದ್ಘಾಟಿಸಲಿದ್ದಾರೆ.ಕ್ರೀಡಾಕೂಟಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಚಾಲನೆ ನೀಡಲಿದ್ದಾರೆ.ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ ಸಿಇಓ ಟಿ.ಬೂಬಾಲನ್ ವಹಿಸುವರು.

ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಕಡ್ಡಾಯವಾಗಿ ಭಾಗವಹಿಸಿ ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಿ.ಬಿ.ಮುಳ್ಳೂರ
ಕ್ರೀಡಾಕಾರ್ಯದರ್ಶಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬಾಗಲಕೋಟೆ ಈ ಮೂಲಕ ವಿನಂತಿಸಿಕೊಂಡಿದ್ದಾರೆ.


Post a Comment

Previous Post Next Post