ಉದ್ಯಮ ಶೀಲತಾ ತರಬೇತಿ ಕಾರ್ಯಾಗಾರಕ್ಕೆ ತಾಪಂ ಇಒ ಪವನ್ ಕುಮಾರ್ ಚಾಲನೆ



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಮಸ್ಕಿ, ಫೆಬ್ರುವರಿ 28 : ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಉದ್ಯಮಗಳು ಪ್ರಮುಖ ಪಾತ್ರ ವಹಿಸಲಿದ್ದು, ಮಹಿಳೆಯರು ಕೌಶಲ್ಯದೊಂದಿಗೆ ಉದ್ಯಮದಲ್ಲಿ ತೊಡಗಿ‌ ಇನ್ನೊಬ್ಬರಿಗೆ ಕೆಲಸ ನೀಡುವಂತಾಗಬೇಕು ಎಂದು‌ ಮಸ್ಕಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪವನ್ ಕುಮಾರ್ ಸಲಹೆ ನೀಡಿದರು.

ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಆರು ದಿನಗಳ‌ ಕಾಲ ಏರ್ಪಡಿಸಿರುವ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ 
ಮಹಿಳೆಯರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಸ್ವ ಉದ್ಯೋಗ ಆರಂಭಿಸಲು ಉಚಿತ ತರಬೇತಿ ಜೊತೆಗೆ ಉದ್ಯೋಗ ಆರಂಭಿಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುತ್ತಿದೆ‌‌. ಮಹಿಳೆಯರು ಪರಸ್ಪರ ಸಹಾಯ ಸಹಕಾರದ ಮೂಲಕ ಉದ್ಯಮ ವಿಸ್ತರಿಸಬೇಕು ಎಂದರು.

ತಾಪಂ ಯೋಜನಾಧಿಕಾರಿ ಇಬ್ರಾಹಿಂ ಪಟೇಲ್ ಮಾತನಾಡಿ, ಗ್ರಾಮೀಣಾಭಿವೃದ್ಧಿಯಲ್ಲಿ ಸ್ವ ಉದ್ಯೋಗ ಪ್ರಮುಖ ಪಾತ್ರ ವಹಿಸಲಿದೆ. ಮಹಿಳೆಯರು‌ ಮನೆಗೆಲಸಕ್ಕೆ ಸೀಮಿತವಾಗದೇ ಉದ್ಯೋಗದಲ್ಲಿ ತೊಡಗಿ ಇತರರಿಗೆ ಮಾದರಿಯಾಗಬೇಕು. ತರಬೇತಿ ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಈ ವೇಳೆ ಎನ್ಆರ್ ಎಲ್ಎಂ ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ ಬನ್ನಿಗೋಳ, ಸಿಡಾಕ್ ಸಂಸ್ಥೆಯ ತರಬೇತುದಾರ ನಾಗರಾಜ್, ಸಮುದಾಯ ಸಂಪನ್ಮೂಲ ವ್ಯಕ್ತಿ ಶೋಭಾ, ಮಸ್ಕಿ ವಲಯ ಮೇಲ್ವಿಚಾರಕ ಪ್ರಕಾಶ್, ಒಕ್ಕೂಟದ ಸಹಾಯಕ ಅರ್ಜುನ‌ ಇತರರಿದ್ದರು.

Post a Comment

Previous Post Next Post