ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ ಮುಖ್ಯ : ಪಂಪಾಪತಿ ಗುತ್ತೆದಾರ್


ಸುದ್ದಿ ಸಂಪಾದಕರು ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಮಸ್ಕಿ, ಫೆಬ್ರುವರಿ 27 : ವಿದ್ಯಾರ್ಥಿ ಜೀವನದಲ್ಲಿ ಸಮಯಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಾಸಂಗ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಾಚಾರ್ಯರಾದ ಪಂಪಾಪತಿ ಗುತ್ತೆದಾರ್ ಹೇಳಿದರು.

ಪಟ್ಟಣದ ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾಲೇಜಿನ 12 ನೇ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡಿಗೆ ಸಮಾರಂಭ ದಲ್ಲಿ ಮಾತನಾಡಿ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಪೋಷಕರು ವಿಷಯಗಳನ್ನು ಆಯ್ದು ಕೊಳ್ಳಲು ಸ್ವಾತಂತ್ರ್ಯ ನೀಡಬೇಕು. ಮಕ್ಕಳು ವಿದೇಯತೆಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿದ್ಯೆ ಸಾರ್ಥಕತೆ ಕಾಣುತ್ತದೆ ಎಂದರು. ಯಾವುದೇ ಕೆಲಸದಲ್ಲಿ ನಿಸ್ವಾರ್ಥತೆ ಮತ್ತು ಪ್ರಾಮಾಣಿಕತೆಗಳು ಇರಬೇಕು. ವಿದ್ಯಾರ್ಥಿಗಳು ಪರೀಕ್ಷೆಯನ್ನು ಪೂರ್ವ ಸಿದ್ಧತೆ ಯೊಂದಿಗೆ ಎದುರಿಸಿದಾಗ ಪರೀಕ್ಷಾ ಭಯ ದೂರವಾಗುತ್ತದೆ ಎಂದರು.
ಅದೇ ರೀತಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಪಿ.ರಾಮು ಮಾತನಾಡಿ 
ಜೀವನದಲ್ಲಿ ಮೌಲ್ಯಗಳು ಹೆಚ್ಚು ಪ್ರಾಮುಖ್ಯತೆಯನ್ನು ಪಡೆದು ಕೊಳ್ಳುತ್ತವೆ. ವಿದ್ಯಾರ್ಥಿ ಹಂತದಲ್ಲಿಯೆ ಉತ್ತಮ ವೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಾಜದಲ್ಲಿ ಶಿಕ್ಷಣ ಇಲ್ಲದಿದ್ದರೆ ಬದುಕು ಕಷ್ಟವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ
ಕಾಲೇಜ್ ನ ಪ್ರಾಚಾರ್ಯರಾದ 
 ಲಕ್ಷ್ಮಣ ಕರ್ಲಿ,ಕಾರ್ಯದರ್ಶಿ, ಪಿ.ರಾಮು, ಉಪನ್ಯಾಸಕರಾದ
ಹುಸೇನ್ ಬಾಷಾ,ಶರಣಬಸವ ಗೋನಾಳ,
ಶಿವು ಪಾಟೀಲ್ ,ಎಮ್ ಡಿ ಯುಸುಪ್, ಹಾಗೂ ವಿದ್ಯಾರ್ಥಿಗಳು ಇದ್ದರು.

Post a Comment

Previous Post Next Post