ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯಗೆ ಏಐಸಿಸಿ ಸದಸ್ಯತ್ವ : ಮಲ್ಲಿಕಾರ್ಜುನ ಖರ್ಗೆ ಆದೇಶ



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಬೆಂಗಳೂರು, ಫೆಬ್ರುವರಿ 21 : ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ.

ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ ಕುರಿತು ಏಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಯುವ ಕಾಂಗ್ರೆಸ್ ವಿಭಾಗದಿಂದ ರಕ್ಷಾ ರಾಮಯ್ಯ ಅವರಿಗೆ ಏಐಸಿಸಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದ್ದು, ಯುವ ಸಮೂಹಕ್ಕೆ ಆದ್ಯತೆ ನೀಡಲಾಗಿದೆ.

Post a Comment

Previous Post Next Post