9ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ, ಸುಭಾಷ್ ವ್ಹಿ. ರಾಠೋಡ ಜೀ ಭಾಗಿ





ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಚಿಂಚೋಳಿ, ಮಾರ್ಚ್ 07 : ತಾಲೂಕಿನ ಗಡಿಭಾಗದ ಕಲ್ಲೂರ ರೋಡ ಗ್ರಾಮದ ಶ್ರೀ ವೀರಭದ್ರೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿಂದು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಚಿಂಚೋಳಿ ವತಿಯಿಂದ ಹಮ್ಮಿಕೊಂಡಿರುವ, ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ, ಚಿಂಚೋಳಿ ಕಾಂಗ್ರೆಸ್ ಮುಖಂಡರಾದ ಶ್ರೀ ಸುಭಾಷ್ ವ್ಹಿ. ರಾಠೋಡ ಜೀ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಮಾರಂಭ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಾಗೂ ನೇತೃತ್ವವನ್ನು ಪರಮ ಪೂಜ್ಯ ಶ್ರೀ. ಷ. ಬ್ರ. ಕರುಣೇಶ್ವರ ಮಹಾಸ್ವಾಮಿಗಳು ಶ್ರೀ ಕಂಚಾಳ ಕುಂಟಿ ನಂದೀಶ್ವರಮಠ ನಿಡಗುಂದಾ ರವರು ವಹಿಸಿದರು.
ಈ ವೇದಿಕೆಯ ಮೇಲೆ ಚಿಂಚೋಳಿ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಡಾ. ಶರಣಪ್ಪ ಮಾಳಗಿ ಸಾಹಿತಿಗಳು ಕಲಬುರಗಿ, ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾದ ಡಾ. ರಾಮಚಂದ್ರ ಗಣಾಪೂರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಜಯಕುಮಾರ ತೇಗಲತಿಪ್ಪಿ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸುರೇಶ ದೇಶಪಾಂಡೆ ರವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಾಹಿತಿಗಳು, ಕವಿಗಳು, ಕನ್ನಡಪರ ಸಂಘಟನೆಯ ಅಧ್ಯಕ್ಷರು, ಮುಖಂಡರು, ಮಕ್ಕಳು, ಕನ್ನಡ ಅಭಿಮಾನಿಗಳೆಲ್ಲರೂ ಉಪಸ್ಥಿತರಿದ್ದರು.

Post a Comment

Previous Post Next Post