ಬಿರುಸಿನ ಗಾಳಿ ಮಳೆಗೆ ರೈತರ ಬೆಳೆ ಹಾನಿ ಮುದ್ನಾಳ



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಯಾದಗಿರಿ,ಮಾರ್ಚ್ 19 : ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಮತ್ತು ಟೊಕಾಪುರ ಸುತ್ತಮುತ್ತಲಿನ ಹಳ್ಳಿಗಳಲ್ಲಿ ನಸುಕಿನ ಜಾವದಲ್ಲಿ ಭಾರೀ ಬಿರುಗಾಳಿ ಸಹಿತ ಆಣೆಕಲ್ಲು ಮಳೆಗೆ ರೈತರು ಬೆಳೆದ ಬೆಳೆದಿರುವ ಬೆಳೆಗಳು ಸಂಪೂರ್ಣ ನೆಲಕಚ್ಚಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಸುದ್ದಿ ತಿಳಿದ ತಕ್ಷಣ ಹಾನಿಗೊಳಗಾದ ರೈತರ ಜಮೀನುಗಳಿಗೆ ಕರ್ನಾಟಕ ರಾಜ್ಯ ಕೊಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ ಮುದ್ನಾಳ್ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಹೇಳಿಕೆ ನೀಡುತ್ತಾ ವರುಣನ ಆರ್ಭಟಕ್ಕೆ ರೈತರು ಬೆಳೆದ ಬೆಳೆಗಳು ಸಂಪೂರ್ಣ ನೆಲ ಕಚ್ಚಿ ರೈತ ಕಂಗಲಾಗಿದ್ದಾನೆ ಕೂಡಲೇ ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಹೋರಾಟಗಾರ ಉಮೇಶ್ ಕೆ ಮುದ್ನಾಳ್.

Post a Comment

Previous Post Next Post