ಮತದಾನ ಜನ ಜಾಗೃತಿ ಸಮಾವೇಶಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್ ರವರಿಂದ ಚಾಲನೆ




ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ
UDAYAVANI NEWS 
ಯಾದಗಿರಿ,ಮಾರ್ಚ್ 23 : ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಪಂಚಾಯತ ಸಂಯುಕ್ತಾಶ್ರಯದಲ್ಲಿ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ನಗರದ ಸುಭಾಶ್ಚಂದ್ರಬೋಸ್ ಅವರ ವೃತ್ತದಲ್ಲಿ ಬೈಕ್ ರಾಲಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಚಾಲನೆ ನೀಡಿದರು.ಈ ಕ್ಯಾಲಿಯೂ ಸುಭಾಶ್ಚಂದ್ರಬೋಸ್ ವೃತ್ತದಿಂದ ಶಾಸ್ತ್ರೀ ವೃತ್ತ, ಡಾ. ಬಿ.ಆರ್ ಅಂಬೇಡ್ಕರ್ ಸರ್ಕಲ್, ಕನಕನಗರ, ನಗರಸಭೆ, ವೀರಶೈವ ಕಲ್ಯಾಣ ಮಂಟಪದಿಂದ ಮಹಾತ್ಮ ಗಾಂಧಿವೃತ್ತದವರೆಗೆ ತಲುಪಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಅಮರೇಶ ಆರ್ ನಾಯ್ಕ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್, ಡಿಹೆಚ್‌ಓ ಡಾ. ಗುರುರಾಜ್, ಭೂ ವಿಜ್ಞಾನ ಇಲಾಖೆ ಅಧಿಕಾರಿ ಡಾ.ಪುಷ್ಪಾವತಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಲಕ್ಷ್ಮೀಕಾಂತ ಒಂಟೀಪೀರ, ಯಾದಗಿರಿ ತಹಶೀಲ್ದಾರ ಅಣ್ಣಾರಾವ್ ಪಾಟೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೆ, ವಿಕಲಚೇತನ ಇಲಾಖೆ ಅಧಿಕಾರಿ ಸಾಧಿಕ್ ಹುಸೇನ್ ಖಾನ್,
ಜಿಲ್ಲಾ ಎನ್ ಆರ್ ಡಿ ಎಮ್ ಎಸ್ ಕೇಂದ್ರದ ಅಧಿಕಾರಿ ಸಿದ್ದರೆಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲೂಕಿನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

Previous Post Next Post