UDAYAVANI NEWS
ಸುರಪುರ, ಮಾರ್ಚ್ 23 : ತಾಲೂಕಿನ ವಾಗಣಗೇರಾ ಗ್ರಾಮದ ಬಿಜೆಪಿ ಪಕ್ಷದ ಹಲವಾರು ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ಯಾದಗಿರಿ ಜಿಲ್ಲಾ ಯುವ ಘಟಕ ಅಧ್ಯಕ್ಷ ರಾಜಾ ಕುಮಾರ್ ನಾಯಕ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ರಾಜಾ ಕುಮಾರ್ ನಾಯಕ ಅವರು ಮಾತನಾಡುತ್ತಾ ಮುಂಬರತಕ್ಕಂತ 2024 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ರಾಜಾ ವೆಂಕಟಪ್ಪ ನಾಯಕ ಅವರನ್ನು ಗೆಲ್ಲಿಸಲು ತಾವೆಲ್ಲರೂ ಹಗಲು ರಾತ್ರಿ ಎನ್ನದೆ ಪ್ರಚಾರದಲ್ಲಿ ತೊಡಗಿ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಲು ನಾವೆಲ್ಲರೂ ಪಣ ತೊಡೋಣ ಎಂದರು.
ಈ ಸಂದರ್ಭದಲ್ಲಿ ನೂತನವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಧ್ವಜವನ್ನು ಕೊಟ್ಟು ಬರ ಮಾಡಿಕೊಂಡರು.
Tags
ಜಿಲ್ಲಾ ಸುದ್ದಿಗಳು