ಭಾನುವಾರ ಜನಶಿರ್ವಾದ ಯಾತ್ರೆಗೆ ಶಾಸಕಿ ರೂಪಶಶಿಧರ್ ಚಾಲನೆ




ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಕೆಜಿಎಫ್, ಮಾರ್ಚ್ 04 : ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಯೊಂದು ಮನೆಮನೆಗೆ ಭೇಟಿ ನೀಡಿ ಜನರ ಆಶೀರ್ವಾದ ಪಡೆಯುವ ಕಾರ್ಯಕ್ರಮವನ್ನು ಕದರಿಗಣಕುಪ್ಪ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಪೂಜೆಯನ್ನು ಸಲ್ಲಿಸಿ ಚಾಲನೆಯನ್ನು ಮಾನ್ಯ ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಒಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ಮತ್ತು ಬೇತಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ರೆಡ್ಡಿ ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಇನ್ನೇನು ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದ್ದು ಶಾಸಕಿಯವರು ಮಾಡಿರುವಂತಹ ಅಭಿವೃದ್ಧಿ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ ಮತದಾರರ ಆಶೀರ್ವಾದ ಪಡೆಯುವ ನಿಟ್ಟಿನಲ್ಲಿ ಪ್ರತಿಯೊಂದು ಮನೆಮನೆಗೂ ಭೇಟಿನೀಡುವ ಕಾರ್ಯಕ್ರಮಕ್ಕೆ ಶಾಸಕರು ಮತ್ತು ಪಕ್ಷದ ಮುಖಂಡರು ಚಾಲನೆ ನೀಡಲಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಮಾತನಾಡಿ ನಮ್ಮ ಭಾಗದಲ್ಲಿ ರೂಪಮ್ಮ ಅವರು ಶಾಸಕಿಯಾಗಿ ಬಂದ ನಂತರ ಹೆಣ್ಣು ಮಕ್ಕಳಿಗೆ ಗೌರವ ಹೆಚ್ಚಾಗಿದೆ ಬಡ್ಡಿರಹಿತ ಸಾಲವನ್ನು ನೀಡುವುದರಿಂದ ಯಾವುದೋ ಒಂದು ರೀತಿಯಲ್ಲಿ ತಮ್ಮ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ ಮತ್ತು ಶಾಸಕಿ ಅನೇಕ ಅಭಿವೃದ್ಧಿ ಕೆಲಸವನ್ನು ಮಾಡಿರುವುದರಿಂದ ಮತ್ತೊಮ್ಮೆ ಅವರನ್ನು ಶಾಸಕರಾಗಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಳ್ಳುತ್ತೇವೆ ಎಂದು ಹೇಳಿದರು.

  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ರೆಡ್ಡಿ ಮಾತನಾಡಿ ಎನ್.ಜಿ.ಹುಲ್ಕುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಇದೆ ಭಾನುವಾರ ಬೆಳಿಗ್ಗೆ 9 ಗಂಟೆಗೆ ಬಂದು ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ನಾರಾಯಣಪ್ಪ,ವೆಂಕಟರಾಮಪ್ಪ, ಜಿಲ್ಲಾ ಎಸ್ ಸಿ/ಎಸ್ಟಿ ಸಂಚಾಲಕ ಲಕ್ಷ್ಮಿಪತಿ,ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್, ಸುಬ್ಬಯ್ಯ ನಾಯ್ಡು,ರಾಮಪ್ಪ,ಮೈಕ್ ನಾರಾಯಣಸ್ವಾಮಿ, ಶ್ರೀನಿವಾಸ್, ಸುಧಾಕರ್, ಶಿವ, ಚಂದ್ರಮೋಹನ್, ಶಂಕರ್,ಚಿಕ್ಕ ಮುನಿಯಪ್ಪ, ಮಾತು ಇತರೆ ಮುಖಂಡರು ಕಾರ್ಯಕರ್ತರು ಇದ್ದರು.

Post a Comment

Previous Post Next Post