ಜೇವರ್ಗಿಗೆ ಇಂದು ವಿಜಯ ಸಂಕಲ್ಪ ಯಾತ್ರೆ ಆಗಮನ - ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಜೇವರ್ಗಿ, ಮಾರ್ಚ್ 05 : ಬೀದರ್ ಜಿಲ್ಲೆ ಶರಣ ನಾಡು ಬಸವ ಕಲ್ಯಾಣದಿಂದ ಆರಂಭವಾದ ವಿಜಯ ಸಂಕಲ್ಪ ರಥಯಾತ್ರೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಚಾಲನೆ ನೀಡಿದ್ದು ಮಾ.6ರಂದು ಪಟ್ಟಣಕ್ಕೆ ಆಗಮಿಸಲಿದೆ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ತಿಳಿಸಿದರು. ರವಿವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಥಯಾತ್ರೆಯಲ್ಲಿ ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಸದಸ್ಯರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಚಿವರಾದ ಬಿ ಶ್ರೀರಾಮಲು, ಆನಂದ ಸಿಂಗ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಹಾಗೂ ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳು ಸ್ಥಳೀಯ ಮುಖಂಡರು ರಥ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಬೆಳಿಗ್ಗೆ 10:30 ಗಂಟೆಗೆ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಬಳಿ ಆಗಮಿಸಲಿರುವ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ಮುಖಂಡರು ಪದಾಧಿಕಾರಿಗಳು ಕಾರ್ಯಕರ್ತರು ಬೈಕ್ ರಾಲಿ ಮುಖಾಂತರ ಅದ್ದೂರಿಯಾಗಿ ಸ್ವಾಗತಿಸಲ್ಲಿದ್ದಾರೆ. ರಿಲಯನ್ಸ್ ಪೆಟ್ರೋಲ್ ಪಂಪ್ ನಿಂದ ಬಸವೇಶ್ವರ ವೃತ್ತದವರೆಗೆ ಪತ್ತೆ ಯಾತ್ರೆ ನಡೆಯಲಿದೆ. ನಂತರ ಕಾರ್ಯಕ್ರಮ ಉದ್ದೇಶಿಸಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ,ಜಗದೀಶ್ ಶೆಟ್ಟರ್, ಸಚಿವರುಗಳಾದ ಆನಂದ್ ಸಿಂಗ್ ಶ್ರೀರಾಮುಲು ಸೇರಿದಂತೆ ಇತರರು ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳ ಕುರಿತು ಮಾತನಾಡಲಿದ್ದಾರೆ ಎಂದು ತಿಳಿಸಿದರು.

Post a Comment

Previous Post Next Post