ಆರ್.ಎಮ್.ರೇವಡಿ ನೇಮಕ





ಉಪ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANINEWS
ಹುಣಸಗಿ,ಏಪ್ರಿಲ್ 01 : ಪಟ್ಟಣದ ಯುವ ಮುಖಂಡರಾದ ಆರ್. ಎಮ್. ರೇವಡಿ ಅವರನ್ನು ಹುಣಸಗಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಪಕ್ಷದ ಹಿರಿಯರ ಮಾರ್ಗದರ್ಶನ ಮತ್ತು ಸ್ಥಳೀಯ ನಾಯಕರ ಸಹಕಾರದೊಡನೆ ಪಕ್ಷ ಬಲವರ್ಧನೆ ಹಾಗೂ 2023 ವಿಧಾನಸಭೆ ಚುನಾವಣೆಯಲ್ಲಿ ಕಾರ್ಯೋನ್ಮುಖರಾಗಿ ಕೆಲಸ ಮಾಡಲು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾದ ಶರಣಪ್ಪ ಸಲದಾಪೂರ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.
ಅಭಿನಂದನೆಗಳು: ಹುಣಸಗಿ ಬ್ಲಾಕ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಿಸಲು ಸಹಕರಿಸಿದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಎಮ್ ಬಿ ಪಾಟೀಲ ಹಾಗೂ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಅರ್. ಎಮ್. ರೇವಡಿ ಅಭಿನಂದನೆಗಳನ್ನು ತಿಳಿಸಿದರು.

Post a Comment

Previous Post Next Post