UDAYAVANI NEWS
ಯಾದಗಿರಿ, ಏ 09 : ಜಿಲ್ಲೆಯ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯವಾಗಿರೋ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಬೆಂಗಳೂರಿನಿಂದ ಸುರಪುರ ಮಾರ್ಗವಾಗಿ ಹುಮನಾಬಾದ ಕಡೆ ಚಲಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕವಡಿಮಟ್ಟಿ ಬಳಿಯಲ್ಲಿ ಪಲ್ಟಿ ಆಗಿದೆ. ಸುದ್ದಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಬಸ್‌ನಲ್ಲಿದ್ದ ಜನರನ್ನ ಹೊರ ತೆಗೆದಿದ್ದು ಆಸ್ಪತ್ರೆ ಕಳಿಸಿದರು, ಕೆಲವರ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಾಲಾಗಿದೆ.
Tags
ಜಿಲ್ಲಾ ಸುದ್ದಿಗಳು