UDAYAVANI NEWS
ಬಾದಾಮಿ, ಏಪ್ರಿಲ್ 01 : ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವಂತೆ ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನದಿ ಹಾಗೂ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವುದರಿಂದ ಬಾದಾಮಿ ಕ್ಷೇತ್ರದ ಕೆರೆಗಳು ಭರ್ತಿಯಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುತ್ತದೆ. ಜಾನುವಾರುಗಳಿಗೂ ಅನುಕೂಲ ಆಗತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮೊನ್ನೆ ಮಾತನಾಡಿದ ಸಿದ್ದರಾಮಯ್ಯ ಅವರು, ಬಾದಾಮಿ ಮತಕ್ಷೇತ್ರದಲ್ಲಿ ಕುಡಿಯುವ ನೀರಿನ ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿದ್ದು ಅಂತರ್ಜಲ ಮಟ್ಟ ಕುಸಿದಿದ್ದು ತೀವ್ರ ತೊಂದರೆಯಾಗಿದೆ ಆದ ಕಾರಣ 15 ದಿನಗಳ ವರೆಗೆ ನದಿ ಹಾಗೂ ಕಾಲುವೆಗಳಿಗೆ ನೀರು ಹರಿಸುವಂತೆ ತಿಳಿಸಿದ್ದಾರೆ.
Tags
ಜಿಲ್ಲಾ ಸುದ್ದಿಗಳು